ಯಕ್ಷರಂಗದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ
ಯಕ್ಷಗಾನ ಮತ್ತು ತಾಳ-ಮದ್ದಳೆ ಕಲಾವಿದ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (90) ಅವರು ಇಂದು ನಿಧನರಾಗಿದ್ದಾರೆ.
ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ ಕುಂಬ್ಳೆ ಸುಂದರ್ ರಾವ್. ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯನಿರ್ವಹಿಸಿದ್ದರು, ಅಲ್ಲದೆ 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆಗೂ ಕುಂಬಳೆ ಸುಂದರ್ ರಾವ್ ಪಾತ್ರರಾಗಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka