ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ನಾಪತ್ತೆ: ಕೂಳೂರು ಸೇತುವೆ ಬಳಿ ಕಾರು ಪತ್ತೆ
ಮಂಗಳೂರು/ಕೂಳೂರು: ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಝ್ ಅಲಿ ಅವರಿ ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ದು, ಅವರ ಕಾರು ಮಂಗಳೂರಿನ ಕೂಳೂರು ಸೇತುವೆ ಮೇಲೆ ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೆಲವು ಕಾರಣಗಳ ಹಿನ್ನೆಲೆ ಮಧ್ಯರಾತ್ರಿ 3 ಗಂಟೆಯ ವೇಳೆಗೆ ಬಿ.ಎಂ. ಮುಮ್ತಾಝ್ ಅಲಿ ಮನೆಯಿಂದ ಕಾರಿನಲ್ಲಿ ತೆರಳಿದ್ದಾರೆ. ನಗರದ ಹಲವೆಡೆಗಳಲ್ಲಿ ಕಾರಿನಲ್ಲಿ ಸುತ್ತಾಡಿದ್ದಾರೆ. ನಂತರ ಕೂಳೂರು ಸೇತುವೆ ಬಳಿ ಕಾರಿಗೆ ಆಕ್ಸಿಡೆಂಟ್ ಮಾಡಿಕೊಂಡಿದ್ದಾರೆ. ನಂತರ ಅವರು ನಾಪತ್ತೆಯಾಗಿದ್ದಾರೆ ಅಂತ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಘಟನೆ ಸಂಬಂಧ ಮಾಹಿತಿ ನೀಡಿದ್ದಾರೆ.
ಸೇತುವೆಗೆ ಅವರು ಹಾರಿರುವ ಶಂಕೆ ಇರುವುದರಿಂದ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಹಾಗೂ ಕೋಸ್ಟ್ ಗಾರ್ಡ್ ತಂಡದ ಸಹಾಯದೊಂದಿಗೆ ಶೋಧ ನಡೆಸುತ್ತಿದ್ದೇವೆ. ಎಫ್ ಎಸ್ ಎಲ್ ತಂಡ ಕಾರು ಮತ್ತು ಘಟನೆ ನಡೆದ ಸ್ಥಳವನ್ನು ಪರಿಶೀಲನೆ ನಡೆಸುತ್ತಿದೆ. ಘಟನೆಗೆ ಕಾರಣವನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: