ಮಾಜಿ ಸಂಸದ ಮೂಡಲಗಿರಿಯಪ್ಪ ಇನ್ನಿಲ್ಲ - Mahanayaka

ಮಾಜಿ ಸಂಸದ ಮೂಡಲಗಿರಿಯಪ್ಪ ಇನ್ನಿಲ್ಲ

mudallagereyappa
23/03/2024


Provided by

ತುಮಕೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಂಸದ ಮೂಡಲಗಿರಿಯಪ್ಪ ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೂಡಲಗಿರಿಯಪ್ಪ ಅವರು ಕಳೆದ ಎರಡು ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಮೂಡಲಗಿರಿಯಪ್ಪ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದರು ಅಲ್ಲದೆ ಒಮ್ಮೆ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿಯೂ ಚುನಾಯಿತರಾಗಿದ್ದರು.

ಮೂಡಲಗಿರಿಯಪ್ಪರನ್ನು ನಾಳೆ ಶಿರಾ ತಾಲೂಕಿನ ಚಿರತನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ತಿಳಿದು ಬಂದಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ