ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮಾಜಿ ಸಂಸದೆ - Mahanayaka
8:52 PM Saturday 14 - September 2024

ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮಾಜಿ ಸಂಸದೆ

29/10/2020

ಉತ್ತರಪ್ರದೇಶ: ಕಾಂಗ್ರೆಸ್ ಹಿರಿಯ ಮುಖಂಡೆ, ಉನ್ನಾವೋದ ಮಾಜಿ ಸಂಸದೆ ಅನ್ನೂ ಟಂಡನ್ ಅವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ  ರಾಜೀನಾಮೆ  ನೀಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾನು ಇಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿದ್ದೇನೆ. ಈ ಬಗ್ಗೆ ಇಂದು ನಾನು ಅಧಿಕೃತವಾಗಿ ಹೇಳಿಕೊಳ್ಳುತ್ತಿದ್ದೇನೆ.  ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೇ ಇರಲಿ ಎಂದು ಹೇಳಿದ್ದಾರೆ.


ತಮ್ಮ ರಾಜೀನಾಮೆಗೆ ಕಾರಣ ತಿಳಿಸಿರುವ ಅವರು,  “ರಾಜ್ಯಮಟ್ಟದ ನಾಯಕತ್ವವು ಸರಿಯಾಗಿಲ್ಲ” ಎಂದು ದೂರಿದ್ದಾರೆ. ಈ ಕಾರಣಕ್ಕಾಗಿ ತಾನು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಅವರು ಹೇಳಿದ್ದಾರೆ.



Provided by

ಇತ್ತೀಚಿನ ಸುದ್ದಿ