ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ವಿಚಾರ: ಕೋವಿಂದ್ ನೇತೃತ್ವದಲ್ಲಿ ನಡೆಯಿತು ಸಮಿತಿಯ ಮೊದಲ ಸಭೆ: ಏನೇನ್ ಚರ್ಚೆ ಆಯಿತು ಗೊತ್ತಾ..? - Mahanayaka
3:27 AM Tuesday 16 - December 2025

ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ವಿಚಾರ: ಕೋವಿಂದ್ ನೇತೃತ್ವದಲ್ಲಿ ನಡೆಯಿತು ಸಮಿತಿಯ ಮೊದಲ ಸಭೆ: ಏನೇನ್ ಚರ್ಚೆ ಆಯಿತು ಗೊತ್ತಾ..?

24/09/2023

ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ವಿಚಾರವಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ತನ್ನ ಮೊದಲ ಸಭೆ ನಡೆಸಿತು. ಇದೇ ವೇಳೆ ರಾಜಕೀಯ ಪಕ್ಷಗಳು ಹಾಗೂ ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿದೆ.

ದೇಶಾದ್ಯಂತ ಲೋಕಸಭಾ ಚುನಾವಣೆಯಿಂದ ಪಂಚಾಯತ್ ಚುನಾವಣೆವರೆಗೂ ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಗಳು ಹಾಗೂ ಅದಕ್ಕೆ ಸಂಬಂಧಿಸಿದ ಶಿಫಾರಸ್ಸುಗಳನ್ನು ನೀಡುವಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ 8 ಸದಸ್ಯರು ಇರುವ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ಕೇಂದ್ರ ಸರ್ಕಾರ ಸೆಪ್ಟೆಂಬರ್ 2 ರಂದು ಅಧಿಸೂಚನೆ ಪ್ರಕಟಿಸಿತ್ತು.

ಗೃಹ ಸಚಿವ ಅಮಿತ್ ಶಾ, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್ ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸಭೆಯಲ್ಲಿ ಭಾಗವಹಿಸಿದ್ದರು.

ಖ್ಯಾತ ವಕೀಲ ಹರೀಶ್ ಸಾಳ್ವೆ ವರ್ಚುವಲ್ ಆಗಿ ಸಭೆಯಲ್ಲಿ ಭಾಗಿಯಾಗಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕ ಅಧೀರ್ ರಂಜನ್ ಚೌಧರಿ ಸಭೆಯಲ್ಲಿ ಹಾಜರಿರಲಿಲ್ಲ. ಸಮಿತಿಗೆ ಅಧೀರ್ ರಂಜನ್ ಚೌಧರಿ ಅವರನ್ನು ನೇಮಕ ಮಾಡಿದ್ದ ಬೆನ್ನಲ್ಲೇ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದ ಅವರು, ಸಮಿತಿಯಲ್ಲಿ ಸೇವೆ ಸಲ್ಲಿಸಲು ನಿರಾಕರಿಸಿದ್ದರು.

ಇತ್ತೀಚಿನ ಸುದ್ದಿ