ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು

15/02/2024
ಬೆಂಗಳೂರು: ಅನಾರೋಗ್ಯ ಕಾರಣಗಳಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲೇ ನಿಗಾ ಇರಿಸಿದ್ದಾರೆ. ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.