ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಿಗಮ್ ಬೋಧ ಘಾಟ್ ನಲ್ಲಿ ಶನಿವಾರ ಸಿಖ್ ಸಂಪ್ರದಾಯದಂತೆ ನೆರವೇರಿತು.
ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವಿರಿಸಿ ನಮನ ಸಲ್ಲಿಸಿದರು.
ಬಳಿಕ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಬಳಿಕ ಮನಮೋಹನ್ ಸಿಂಗ್ ಅಮರ್ ರಹೇ ಎಂದು ಘೋಷಣೆ ಕೂಗಲಾಯಿತು.
ಸಿಖ್ ಸಂಪ್ರದಾಯದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ನಡೆಸಲಾಯಿತು. ಕರ್ನಾಟಕ ರಾಜ್ಯದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಮಾಜಿ ಸಿಎಂ ವೀರಪ್ಪ ಮೋಯ್ಲಿ, ಆರ್.ವಿ.ದೇಶಪಾಂಡೆ ಮೊದಲಾದವರು ಅಂತಿಮ ನಮನ ಸಲ್ಲಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: