ಅಶೋಕ್ ಗೆಹ್ಲೋಟ್ ರಿಗೆ ಕೋವಿಡ್ ದೃಢ: ಹಂದಿ ಜ್ವರದಿಂದಲೂ ಬಳಲುತ್ತಿರುವ ರಾಜಸ್ಥಾನದ ಮಾಜಿ ಸಿಎಂ

03/02/2024

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೋವಿಡ್ -19 ಮತ್ತು ಹಂದಿ ಜ್ವರ ಎರಡರಿಂದಲೂ ಬಳಲುತ್ತಿದ್ದಾರೆ ಎಂದು ಬಯಲಾಗಿದೆ. ಈ ಕುರಿತು ಅವರು ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಗೆಹ್ಲೋಟ್ ಬರೆದುಕೊಂಡಿದ್ದಾರೆ.

“ಕಳೆದ ಕೆಲವು ದಿನಗಳಿಂದ ಜ್ವರದಿಂದಾಗಿ, ವೈದ್ಯರ ಸಲಹೆಯ ಮೇರೆಗೆ ಇಂದು ಪರೀಕ್ಷೆಗೆ ಒಳಗಾಗಿದ್ದೇನೆ, ಇದು ಕೋವಿಡ್ ಮತ್ತು ಹಂದಿ ಜ್ವರವನ್ನು ದೃಢಪಡಿಸಿದೆ. ಈ ಕಾರಣದಿಂದಾಗಿ ನಾನು ಮುಂದಿನ ಏಳು ದಿನಗಳವರೆಗೆ ಭೇಟಿಯಾಗಲು ಸಾಧ್ಯವಾಗುವುದಿಲ್ಲ’ ಎಂದಿದ್ದಾರೆ.
ಇದೇ ವೇಳೆ ಒಬ್ಬರ ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಮಹತ್ವವನ್ನು ಗೆಹ್ಲೋಟ್ ಒತ್ತಿ ಹೇಳಿದ್ದಾರೆ.

“ಬದಲಾಗುತ್ತಿರುವ ಈ ಋತುವಿನಲ್ಲಿ, ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು” ಎಂದು ಅವರು ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಆರೋಗ್ಯ ಚೇತರಿಕೆಗಾಗಿ ಮಾಜಿ ಮುಖ್ಯಮಂತ್ರಿಯನ್ನು ಜೈಪುರದ ಎಸ್ಎಂಎಸ್ ಆಸ್ಪತ್ರೆಯ ಐಡಿಎಚ್ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ರಾಜಸ್ಥಾನದ ಮಾಜಿ ಸಿಎಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ವೈದ್ಯಕೀಯ ವೃತ್ತಿಪರರ ಕಣ್ಗಾವಲಿನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version