ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾರ ಕೋಟಿ ಕೋಟಿ ಬೆಲೆಬಾಳುವ ವಸ್ತುಗಳು ಸರ್ಕಾರಕ್ಕೆ ಹಸ್ತಾಂತರ

ಜಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, 11,344 ರೇಷ್ಮೆ ಸೀರೆಗಳು, 7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, ವಾಚ್‌ಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.
ಈ ಸಂಬಂಧ ಈಗಾಗಲೇ ತಮಿಳುನಾಡು ಪೊಲೀಸರು ಮತ್ತು ಅಧಿಕಾರಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ .ಈ ಹಿಂದೆ ಜಯಲಲಿತಾ ಅವರ ಸಂಬಂಧಿಕರು ಎಂದು ಹೇಳಿಕೊಂಡಿದ್ದ ದೀಪ ಹಾಗೂ ದೀಪಕ್ ಎಂಬುವವರು ತಾವು ಜಯಲಲಿತಾ ಅವರ ಸಂಬಂಧಿಕರಾಗಿದ್ದು, ಜಯಲಲಿತಾ ಒಡವೆಯನ್ನ ನಮಗೆ ಕೊಡಿ ಎಂದು ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿಯನ್ನ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಅವರ ಅರ್ಜಿಯನ್ನು ವಜಾ ಮಾಡಿತ್ತು.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ರಿಂದ ಮುಟ್ಟುಗೋಲು ಹಾಕಿಕೊಂಡಿದ್ದ ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡುವಂತೆ ವಿಶೇಷ ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು.
7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು, 700 ಕೆ.ಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 VCR, 1 ವಿಡಿಯೋ ಕ್ಯಾಮರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್ ಹಾಗೂ 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್ಗಳು ತಮಿಳುನಾಡು ಸರ್ಕಾರಕ್ಕೆ ಸೇರಲಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj