ಲೈಂಗಿಕ ಕಿರುಕುಳ ಕೇಸಲ್ಲಿ ತಮಿಳುನಾಡಿನ ಮಾಜಿ ಪೊಲೀಸ್ ಅಧಿಕಾರಿ ರಾಜೇಶ್ ದಾಸ್ ದೋಷಿ..!

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿಯನ್ನು ದೋಷಿ ಎಂದು ತಮಿಳುನಾಡಿನ ಸ್ಥಳೀಯ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.
ವಿಲ್ಲುಪುರಂ ನ್ಯಾಯಾಲಯವು ಮಾಜಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅವರು ತನ್ನ ಸಹ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ
ವರದಿ ಮಾಡಿದೆ.
ನ್ಯಾಯಾಲಯವು ಇವರಿಗೆ 10,000 ರೂಪಾಯಿಗಳ ದಂಡವನ್ನು ವಿಧಿಸಿದೆ. 2021 ರ ಆರಂಭದಲ್ಲಿ ದಾಖಲಾದ ದೂರಿನ ಆಧಾರದ ಮೇಲೆ ಕಿರಿಯ ಮಹಿಳಾ ಪೊಲೀಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ದಾಸ್ ವಿರುದ್ಧ ಹೊರಿಸಲಾಗಿದೆ. ಆಗಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಭದ್ರತೆಗಾಗಿ ಕರ್ತವ್ಯದಲ್ಲಿದ್ದಾಗ ದಾಸ್ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳಾ ಐಪಿಎಸ್ ಅಧಿಕಾರಿ ತನ್ನ ದೂರಿನಲ್ಲಿ ಆರೋಪಿಸಿದ್ದರು.
ದಾಸ್ ವಿರುದ್ಧ ದೂರು ದಾಖಲಿಸದಂತೆ ಮಹಿಳೆಯನ್ನು ಅನೇಕ ಮಂದಿ ತಡೆಯಲು ಪ್ರಯತ್ನಿಸಿದ್ದರು.
ಮಹಿಳಾ ಅಧಿಕಾರಿಯ ದೂರನ್ನು ಗಂಭೀರವಾಗಿ ಪರಿಗಣಿಸಿದ ಹಿಂದಿನ ಎಐಎಡಿಎಂಕೆ ಸರ್ಕಾರವು ದಾಸ್ ಅವರನ್ನು ಅಮಾನತುಗೊಳಿಸಿತ್ತು. ಇವರ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಆರು ಸದಸ್ಯರ ಸಮಿತಿಯನ್ನು ರಚಿಸಿತ್ತು. ವಿಚಾರಣೆಯ ಸಮಯದಲ್ಲಿ, ಪ್ರಾಸಿಕ್ಯೂಷನ್ ಪೊಲೀಸ್ ಸಿಬ್ಬಂದಿ ಸೇರಿದಂತೆ 68 ಜನರ ಹೇಳಿಕೆಗಳನ್ನು ದಾಖಲಿಸಿದೆ.
ಶಿಕ್ಷೆಯ ನಂತರ, ದಾಸ್ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಬಹುದು ಮತ್ತು ಪ್ರಾಸಿಕ್ಯೂಷನ್ ಪ್ರಕಾರ ತಕ್ಷಣದ ಜಾಮೀನು ಪಡೆಯಬಹುದು.
ಲೈಂಗಿಕ ಕಿರುಕುಳ ಪ್ರಕರಣವು 2021 ರಲ್ಲಿ ದೊಡ್ಡ ಚುನಾವಣಾ ವಿಷಯವಾಗಿ ಮಾರ್ಪಟ್ಟಿತ್ತು. ಆಗಿನ ವಿರೋಧ ಪಕ್ಷದ ನಾಯಕ ಮತ್ತು ಈಗಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಅಧಿಕಾರಕ್ಕೆ ಬಂದರೆ ಸೂಕ್ತ ಕಾನೂನು ಪ್ರಕ್ರಿಯೆ ಮತ್ತು ಶಿಕ್ಷೆಯ ಭರವಸೆ ನೀಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw