ಪಕ್ಷದ ಕಚೇರಿಯಲ್ಲೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪಶ್ಚಿಮ ಬಂಗಾಳದ ಮಾಜಿ ಡೆಪ್ಯೂಟಿ ಸ್ಪೀಕರ್ ಪತ್ತೆ - Mahanayaka
3:28 AM Tuesday 8 - September 2026

ಪಕ್ಷದ ಕಚೇರಿಯಲ್ಲೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪಶ್ಚಿಮ ಬಂಗಾಳದ ಮಾಜಿ ಡೆಪ್ಯೂಟಿ ಸ್ಪೀಕರ್ ಪತ್ತೆ

ashis banerjee
16/08/2026

ಕೋಲ್ಕತ್ತಾ:  ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಡೆಪ್ಯೂಟಿ ಸ್ಪೀಕರ್ ಅಸೀಶ್ ಬ್ಯಾನರ್ಜಿ ಅವರು ಬಿರ್ಭುಮ್ ಜಿಲ್ಲೆಯ ರಾಂಪುರ್‌ ಹಾಟ್‌ ನಲ್ಲಿರುವ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಕಚೇರಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ರಾಂಪುರ್‌ ಹಾಟ್‌ ನಲ್ಲಿರುವ ಅವರ ನಿವಾಸದ ಬಳಿಯ ಪಕ್ಷದ ಕಚೇರಿಯಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.

ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮರಣದ ಹಿಂದಿನ ನಿಖರವಾದ ಕಾರಣ ಮತ್ತು ಸಂದರ್ಭಗಳು ಇನ್ನೂ ಸ್ಪಷ್ಟವಾಗಿಲ್ಲ. ಸುಸೈಡ್ ನೋಟ್ (ಡೆತ್ ನೋಟ್) ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಅಸೀಶ್ ಬ್ಯಾನರ್ಜಿ ಅವರು ರಾಂಪುರ್‌ ಹಾಟ್ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕಾರಾವಧಿಯಲ್ಲಿ ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti