ದುಬಾರಿ ಸೀರೆ ಕದ್ದು ಪರಾರಿಯಾಗ್ತಿದ್ದ ನಾಲ್ವರು ಆರೋಪಿಗಳ ಬಂಧನ!
ಬೆಂಗಳೂರು: ದುಬಾರಿ ಬೆಲೆಯ ಸೀರೆಗಳನ್ನು ಕದ್ದು ಪರಾರಿಯಾಗುತ್ತಿದ್ದ ನಾಲ್ವರು ಆರೋಪಿಗಳನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 17.5 ಲಕ್ಷ ಬೆಲೆಬಾಳುವ 38 ರೇಷ್ಮೆ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.
ಜಾನಕಿ, ಪೊನ್ನುರು ಮಲ್ಲಿ, ಮೇಧ ರಜಿನಿ ಹಾಗೂ ವೆಂಕಟೇಶ್ವರಮ್ಮ ಬಂಧಿತ ಆರೋಪಿಗಳಾಗಿದ್ದಾರೆ. ಬಟ್ಟೆ ಖರೀದಿಸುವ ನೆಪದಲ್ಲಿ ಅಂಗಡಿಗೆ ತೆರಳುತ್ತಿದ್ದ ಈ ಮಹಿಳೆಯರು ಅಂಗಡಿಯ ಸಿಬ್ಬಂದಿಯ ಗಮನ ಬೇರೆಡೆಗೆ ಸೆಳೆದು ಸೀರೆ ಕದ್ದು ಪರಾರಿಯಾಗ್ತಿದ್ರಂತೆ.
ಜೆ.ಪಿ. ನಗರ ಠಾಣಾ ವ್ಯಾಪ್ತಿಯ ಸಿಲ್ಕ್ ಹೌಸ್ ವೊಂದರಲ್ಲಿ ಸೀರೆ ಖರೀದಿ ನೆಪದಲ್ಲಿ ಬಂದ ಆರು ಮಂದಿ ಆರೋಪಿಗಳು ದುಬಾರಿ ಬೆಲೆಯ ರೇಷ್ಮೆ ಸೀರೆ ತೋರಿಸುವಂತೆ ಸಿಬ್ಬಂದಿಗೆ ಸೂಚಿಸಿದ್ದರು. ಸೀರೆಗಳನ್ನ ತೋರಿಸುವಾಗಲೇ ಕೈಚಳಕ ತೋರಿಸಿ ಸಿಬ್ಬಂದಿಗಳ ಗಮನ ಬೇರೆಡೆ ಸೆಳೆದು 8 ಹೊಸ ಸೀರೆಗಳನ್ನು ತಮ್ಮ ಸೀರೆಯೊಳಗೆ ಅಡಗಿಸಿಟ್ಟುಕೊಂಡು ಸ್ಥಳದಿಂದ ಪರಾರಿಯಾಗಿತ್ತು.
ಬಳಿಕ ಅಂಗಡಿಯಲ್ಲಿದ್ದ ನಾಲ್ವರು ಮಹಿಳೆಯರು ಒಟ್ಟು 10 ಸೀರೆಗಳನ್ನ ಬಚ್ಚಿಟ್ಟುಕೊಂಡು ಅಂಗಡಿಯಿಂದ ಹೊರ ಹೋಗುವಾಗ ಅನುಮಾನಗೊಂಡ ಸಿಬ್ಬಂದಿ ತಡೆದು ಪರಿಶೀಲಿಸಿದಾಗ ಕಳ್ಳತನ ಕೃತ್ಯ ಬಯಲಾಗಿತ್ತು.
ಅಂಗಡಿಯವರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಜಯನಗರ, ಜೆ.ಪಿ. ನಗರ ಸೀರೆ ಅಂಗಡಿಗಳಲ್ಲಿಯೂ ಈ ಮಹಿಳೆಯರು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.
ಈ ಮಹಿಳೆಯರು ಆಂಧ್ರಪ್ರದೇಶ ಮೂಲದವರಾಗಿದ್ದು, ಸೀರೆ ಕದಿಯುವುದು ಮತ್ತು ಅದನ್ನು ತಮ್ಮ ಸ್ನೇಹಿತೆಯರ ಮೂಲಕ ಮಾರಾಟ ಮಾಡುವ ಜಾಲವನ್ನು ಸೃಷ್ಟಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: