ಕರೋಲ್ ಬಾಗ್ ಕಟ್ಟಡ ಕುಸಿತ: ನಾಲ್ವರು ಸಾವು, 14 ಮಂದಿಗೆ ಗಾಯ
ದಿಲ್ಲಿಯ ಕರೋಲ್ ಬಾಗ್ ನ ಬಾಪಾ ನಗರದಲ್ಲಿ ಹಳೆಯ ಕಟ್ಟಡದ ಒಂದು ಭಾಗ ಕುಸಿದ ಪರಿಣಾಮ ನಾಲ್ಕು ಜನರು ಸಾವನ್ನಪ್ಪಿದ್ದಾರೆ. 14 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಕೆಟ್ಟ ಸ್ಥಿತಿಯಲ್ಲಿರುವ ಹಳೆಯ ಕಟ್ಟಡಗಳ ಬಗ್ಗೆ ದೆಹಲಿ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರು ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಸರ್ಕಾರದ ಅಜಾಗರೂಕತೆ ರಾಷ್ಟ್ರ ರಾಜಧಾನಿಯಲ್ಲಿ ಇಂತಹ ದುರಂತಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ. ಕರೋಲ್ ಬಾಗ್ ನ ಬಾಪಾ ನಗರದಲ್ಲಿ ಹಳೆಯ ಕಟ್ಟಡದ ಒಂದು ಭಾಗ ಕುಸಿದ ಕಾರಣ ಗಾಯಗೊಂಡ ಜನರನ್ನು ಆಸ್ಪತ್ರೆಯಲ್ಲಿ ಭೇಟಿಯಾದರು.
ಕಟ್ಟಡ ಕುಸಿತದ ಘಟನೆಯಿಂದಾಗಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 14 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.
“ಕೆಟ್ಟ ಸ್ಥಿತಿಯಲ್ಲಿರುವ ಕಟ್ಟಡಗಳ ಬಗ್ಗೆ ದೆಹಲಿ ಸರ್ಕಾರವು ಗಮನ ಹರಿಸಬೇಕಾಗಿದೆ” ಎಂದು ಸ್ವರಾಜ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ದೆಹಲಿ ಸರ್ಕಾರದ ಅಜಾಗರೂಕತೆಯಿಂದ ದೆಹಲಿಯ ಜನರು ಇಂತಹ ದುರಂತಗಳನ್ನು ಎದುರಿಸುತ್ತಲೇ ಇರುತ್ತಾರೆ ಎಂದು ಅವರು ಆರೋಪಿಸಿದ್ದಾರೆ.
ದೆಹಲಿ ಸರ್ಕಾರವು ಅಧಿಕಾರಿಗಳನ್ನು ಮಾತ್ರ ದೂಷಿಸುತ್ತಿದೆ ಎಂದು ಅವರು ಹೇಳಿದರು. ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗರ್ಗ್ ಅವರ ಪ್ರಕಾರ, ಕರೋಲ್ ಬಾಗ್ ನ ಬಾಪಾ ನಗರದಲ್ಲಿ ಕಟ್ಟಡ ಕುಸಿತದ ಬಗ್ಗೆ ಡಿಎಫ್ಎಸ್ ಗೆ ಬೆಳಿಗ್ಗೆ 9.10 ಕ್ಕೆ ಮಾಹಿತಿ ಬಂದಿದೆ. “ಮಾಹಿತಿ ಪಡೆದ ಕೂಡಲೇ, ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು, 5 ಅಗ್ನಿಶಾಮಕ ಟೆಂಡರ್ ಗಳೊಂದಿಗೆ ಸ್ಥಳಕ್ಕೆ ಧಾವಿಸಿದರು” ಎಂದು ಅವರು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth