ರಾಜ್ ಕೋಟ್ ಅಗ್ನಿ ದುರಂತ: ನಾಲ್ವರು ಸರ್ಕಾರಿ ಅಧಿಕಾರಿಗಳ ಬಂಧನ

31/05/2024

ಕಳೆದ ವಾರ ನಗರದ ಟಿಆರ್‌ಪಿ ಗೇಮ್ ಜೋನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಬೆಂಕಿಗೆ ಸಂಬಂಧಿಸಿದಂತೆ ಗುಜರಾತ್ ನ ರಾಜ್ ಕೋಟ್ ಪೊಲೀಸರು ನಗರ ಯೋಜನಾ ಅಧಿಕಾರಿ (ಟಿಪಿಒ) ಸೇರಿದಂತೆ ನಾಲ್ವರು ಸರ್ಕಾರಿ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಟಿಪಿಒ ಎಂ.ಡಿ.ಸಗಾಥಿಯಾ, ಸಹಾಯಕ ಟಿಪಿಒಗಳಾದ ಮುಖೇಶ್ ಮಕ್ವಾನಾ ಮತ್ತು ಗೌತಮ್ ಜೋಶಿ ಮತ್ತು ಕಲವಾಡ್ ರಸ್ತೆ ಅಗ್ನಿಶಾಮಕ ಠಾಣೆಯ ಮಾಜಿ ಸ್ಟೇಷನ್ ಆಫೀಸರ್ ರೋಹಿತ್ ವಿಗೊರಾ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಲ್ವರು ಸರ್ಕಾರಿ ಅಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ದೃಢಪಡಿಸಿದ್ದಾರೆ.

ಸರ್ಕಾರ ಈಗಾಗಲೇ ಜೋಶಿ ಮತ್ತು ವಿಗೋರಾ ಅವರನ್ನು ಅಮಾನತುಗೊಳಿಸಿದೆ.
ಈ ಪ್ರಕರಣದಲ್ಲಿ ಈವರೆಗೆ ಕನಿಷ್ಠ ಒಂಬತ್ತು ಜನರನ್ನು ಬಂಧಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version