ಹೃದಯ ವಿದ್ರಾವಕ ಘಟನೆ: ಬೈಕ್—ಲಾರಿ ನಡುವಿನ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು
30/09/2024
ಕಾರ್ಕಳ: ಮಿನಿ ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಾರ್ಕಳ—ಧರ್ಮಸ್ಥಳ ಹೆದ್ದಾರಿಯಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರುನ ಪಾಜೆಗುಡ್ಡೆ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕುಟುಂಬದ ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಎಂದು ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ (32) ಎಂಬವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೈಕ್ ನಲ್ಲಿದ್ದ ಒಂದೇ ಕುಟುಂಬದ ನಾಲ್ವರ ಮೃತದೇಹ ಛಿದ್ರಛಿದ್ರ ಗೊಂಡಿದೆ. ಬೈಕ್ ನಜ್ಜುಗುಜ್ಜಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: