ಧರ್ಮಸ್ಥಳಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಅಪಘಾತಕ್ಕೆ ಬಲಿ! - Mahanayaka
12:28 AM Wednesday 22 - October 2025

ಧರ್ಮಸ್ಥಳಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಅಪಘಾತಕ್ಕೆ ಬಲಿ!

chikkamagaluru banakkal 1
24/05/2024

ಕೊಟ್ಟಿಗೆಹಾರ (ಚಿಕ್ಕಮಗಳೂರು): ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆಸ್ಕಾಂ ಲಾರಿ ಮತ್ತು ಓಮಿನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೀಕರ ಅಪಘಾತದಲ್ಲಿ ಚಿತ್ರದುರ್ಗದ ನಾಲ್ವರು ಮೃತಪಟ್ಟಿದ್ದಾರೆ.

ಧರ್ಮಸ್ಥಳಕ್ಕೆ ತೆರಳಿದ್ದ ಒಂದೇ ಕುಟುಂಬದವರು ಓಮಿನಿ ವ್ಯಾನ್ ಹಾಗೂ ಆಲ್ಟೋ ಕಾರಿನಲ್ಲಿ ಚಿತ್ರದುರ್ಗಕ್ಕೆ ವಾಪಾಸ್ ತೆರಳುತ್ತಿದ್ದಾಗ ಕೊಟ್ಟಿಗೆಹಾರದಿಂದ ಮುಂದೆ  ಬಣಕಲ್ ವಿಲೇಜ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಿಂದ ಬರುತ್ತಿದ್ದ ಮೆಸ್ಕಾಂ ಲಾರಿಗೆ ಒಮಿನಿ ಕಾರು ಡಿಕ್ಕಿ ಹೊಡೆದಿದೆ.ಅದರ ಹಿಂದೆ ಇದ್ದ ಆಲ್ಟೊ ಕಾರು ಕೂಡ ಓಮಿನಿ ಕಾರಿಗೆ ಡಿಕ್ಕಿಯಾಗಿದೆ. ಲಾರಿ ಗುದ್ದಿದ ರಭಸಕ್ಕೆ ಒಮಿನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, ಓರ್ವ ಆಸ್ಪತ್ರೆಗೆ ಸಾಗುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

chikkamagaluru banakkal

ಮೃತಪಟ್ಟವರನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಸಮೀಪದ ಚನ್ನಪಟ್ಟಣದ ಹಂಪಯ್ಯ(65), ಮಂಜಯ್ಯ (60), ಪ್ರೇಮ(58) ಹಾಗೂ ಪ್ರಭಾಕರ(45) ಎಂದು ಗುರುತಿಸಲಾಗಿದೆ. ಓಮಿನಿ ಕಾರಲ್ಲಿ ಒಂಭತ್ತು ಮಂದಿ ಹಾಗೂ ಆಲ್ಟೋ ಕಾರಿನಲ್ಲಿ ಏಳು ಜನ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಲ್ಟೋ ಕಾರಿನಲ್ಲಿ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಮೃತ ದೇಹಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಓಮಿನಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ