ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ನಾಲ್ವರು ವಲಸೆ ಕಾರ್ಮಿಕರು ಸಾವು: 20 ಮಂದಿಗೆ ಗಾಯ

ಚಂಡೀಗಢ: ಹರ್ಯಾಣದ ಕರ್ನಲ್ ಜಿಲ್ಲೆಯ ತಾರೋರಿಯಲ್ಲಿ ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಬಿಹಾರದ ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಾಗ ಕಟ್ಟಡದಲ್ಲಿ 150ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಘಟನೆಯಲ್ಲಿ ಕಟ್ಟಡದೊಳಗೆ ಒಟ್ಟು 24 ಮಂದಿ ಸಿಲುಕಿಕೊಂಡರು. ಈ ಪೈಕಿ ನಾಲ್ವರು ಸಾವಿಗೀಡಾಗಿದ್ದು, 20 ಮಂದಿಗೆ ಗಾಯವಾಗಿದೆ.
ಕೆಲವರು ಅಪಾಯ ಅರಿತು ಕಟ್ಟಡದ ಕಿಟಕಿಯಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಕಟ್ಟಡದ ರಚನೆಯು ಅಸುರಕ್ಷಿತವಾಗಿದ್ದು, ಕಟ್ಟಡ ಕುಸಿತಕ್ಕೆ ಇದೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.
ಕಟ್ಟಡ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಘಟನಾ ಸ್ಥಳದಲ್ಲಿ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw