ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಜೋಡಿ ಸಾವಿಗೆ ಶರಣು!
ವಿಜಯಪುರ : ಪ್ರೀತಿಸಿ ವಿವಾಹವಾಗಿದ್ದ ನವ ವಿವಾಹಿತ ಜೋಡಿಯೊಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ವಿಜಯಪುರ ಹೊರಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.
ಮನೋಜ್ ಕುಮಾರ್ ಪೋಳ (30) ರಾಖಿ (23) ಸಾವಿಗೆ ಶರಣಾದ ನವವಿವಾಹಿತ ಜೋಡಿಗಳು ಎಂದು ಹೇಳಲಾಗುತ್ತಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಜೋಡಿ ನೇಣಿಗೆ ಶರಣಾಗಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಇವರಿಬ್ಬರೂ ಪರಸ್ಪರ ಪ್ರೀತಿಸಿ ಮನೆಯಲ್ಲಿ ಒಪ್ಪಿಸಿ ಮದುವೆಯಾಗಿದ್ದರು . ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಆದರೆ ಬೆಳಗ್ಗೆ ಬಂದು ನೋಡಿದ ವೇಳೆ ಇಬ್ಬರೂ ನೇಣಿಗೆ ಶರಣಾಗಿದ್ದರು ಎಂದು ಅಮೃತ ರಾಕಿ ತಾಯಿ ಭಾರತಿ ಅವರು ತಿಳಿಸಿದ್ದಾರೆ.
ಇವರ ಸಾವಿಗೆ ನಿಖರ ಏನು ಕಾರಣ ಎಂಬುದು ತಿಳಿದು ಬಂದಿಲ್ಲ ಘಟನೆ ಕುರಿತಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97

























