ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕರ್ನಾಟಕದ ನಾಲ್ವರು ಸಂಸದರು

ಬೆಂಗಳೂರು: ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ನೂತನ ಕೇಂದ್ರ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಡುವೆ ಕರ್ನಾಟಕದಿಂದ ಈ ಬಾರಿ ನಾಲ್ವರು ಮಂತ್ರಿಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇಂದು ಸಂಜೆಯೇ ನಾಲ್ವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಹೈಕಮಾಂಡ್ ಮಾತಿನಂತೆ ಎರಡು ಕ್ಷೇತ್ರದಲ್ಲಿ ನಿಂತು ಸೋಲುಂಡಿದ್ದ ವಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ದೊರಕಿದೆ.
ಎನ್ಡಿಎ ಮೈತ್ರಿ ಪಕ್ಷ ಜೆಡಿಎಸ್ ನಾಯಕರಾಗಿರುವ ಎಚ್ಡಿ ಕುಮಾರಸ್ವಾಮಿ ಅವರಿಗೂ ಸಚಿವ ಸ್ಥಾನ ಖಚಿತವಾಗಿದೆ. ಉಳಿದಂತೆ ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದಿಂದ ಒಟ್ಟು ನಾಲ್ವರು ಪ್ರಮಾಣವಚನ ಸ್ವೀಕರಿಸಲಿದ್ದು, ಮಂಡ್ಯ ಗೆದ್ದಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರಿಗೆ ಕೃಷಿ ಖಾತೆ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಹ್ಲಾದ್ ಜೋಶಿ ಧಾರವಾಡ-ಹುಬ್ಬಳ್ಳಿ ಸಂಸದರಾಗಿದ್ದು, ಕೇಂದ್ರ ಸಚಿವರಾಗಿದ್ದರು. ಇದೀಗ ಮತ್ತೊಮ್ಮೆ ಮೋದಿ ಸಂಪುಟ ಸೇರ್ಪಡೆಯಾಗುತ್ತಿದ್ದಾರೆ. ಮೂಲಗಳ ಪ್ರಕಾರ ಈಗಿರುವ ಸಂಸದೀಯ ಮತ್ತು ಕಲ್ಲಿದ್ದಲು ಖಾತೆಯಲ್ಲೇ ಮುಂದುವರೆಸಬಹುದು. ಇನ್ನು ಶೋಭಾ ಕರಂದ್ಲಾಜೆ ಅವರಿಗೂ ಅವರ ರಾಜ್ಯ ಖಾತೆ ಮುಂದುವರಿಯಲಿದೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97