ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗಲಿ ನಾಲ್ವರು ಸಾವು - Mahanayaka
8:28 AM Saturday 18 - October 2025

ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗಲಿ ನಾಲ್ವರು ಸಾವು

jharkhand
29/07/2023

ರಾಂಚಿ: ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗಲಿ ನಾಲ್ವರು ಮೃತಪಟ್ಟು, ಸುಮಾರು 10 ಮಂದಿ ಗಾಯಗೊಂಡಿರುವ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.


Provided by

ಬೊಕಾರೊ ಜಿಲ್ಲೆಯ ಖೆಟ್ಕೊ ಎನ್ನುವ ಗ್ರಾಮದಲ್ಲಿ ಮೊಹರಂ ಆಚರಣೆ ನಡೆಯುತ್ತಿತ್ತು. ಕಬ್ಬಿಣದ ಧಾರ್ಮಿಕ ಧ್ವಜವು ಮೆರವಣಿಗೆ ವೇಳೆ ಆಕಸ್ಮಿಕವಾಗಿ 11 ವೋಲ್ಟ್ ನ ವಿದ್ಯುತ್ ತಂತಿಗೆ ತಗಲಿದ್ದು, ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಬೊಕಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ ಸುಮಾರು 6 ಗಂಟೆಯ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ