ಕಾರು ಮತ್ತು ತೂಫಾನ್ ಢಿಕ್ಕಿ: ಮಗು ಸೇರಿದಂತೆ ನಾಲ್ವರು ದಾರುಣ ಸಾವು

ಕಾರು ಹಾಗೂ ತೂಫಾನ್ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು ಮತ್ತು ತೂಫಾನ್ ವಾಹನ ಮುಖಾಮುಖಿಯಾಗಿ ಬಂದು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರು ಕುಕ್ಕೆ ಕಡೆಗೆ ತೆರಳುತ್ತಿತ್ತು ಹಾಗೂ ತೂಫನ್ ವಾಹನ ಧರ್ಮಸ್ಥಳದೆಡೆಗೆ ತೆರಳುತ್ತಿತ್ತು.
ಈ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw