ಕಾರು ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ, ಮೂರು ದನಗಳು ಸಾವು
09/07/2023
ಕಾರೊಂದು ಅಪಘಾತಕ್ಕೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ನಗರದ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ನಡೆದಿದೆ.
ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಅಪಘಾತ ಸಂಭವಿಸಿದೆ.
ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದ ಮೂರು ದನಗಳು ಸಾವಿಗೀಡಾಗಿವೆ. ಕಾರು ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ಸಂಚರಿಸುತ್ತಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























