ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಅವಶೇಷಗಳಡಿ ಸಿಕ್ಕಿಬಿದ್ದವರಿಗಾಗಿ ಶೋಧ
ನವೀ ಮುಂಬೈನ ಬೆಲಾಪುರ ಪ್ರದೇಶದಲ್ಲಿ ಶನಿವಾರ ಮುಂಜಾನೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದೆ. ಇಬ್ಬರು ವ್ಯಕ್ತಿಗಳನ್ನು ರಕ್ಷಿಸಲಾಗಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಇನ್ನೊಬ್ಬರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಎನ್ ಡಿಆರ್ ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಹಬಾಜ್ ಗ್ರಾಮದಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಕಟ್ಟಡ ಕುಸಿತದ ನಂತರ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ ಡಿಆರ್ ಎಫ್) ಮತ್ತು ನವೀ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ಅಗ್ನಿಶಾಮಕ ದಳದ ಸಿಬ್ಬಂದಿ ಇಬ್ಬರು ವ್ಯಕ್ತಿಗಳನ್ನು ರಕ್ಷಿಸಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಮತ್ತೋರ್ವನನ್ನು ಸುರಕ್ಷಿತವಾಗಿ ಹೊರತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth