6:43 AM Saturday 20 - December 2025

ನಾಲ್ವರು ಟೊಮೆಟೋ ಕಳ್ಳರ ಬಂಧನ: 2 ಟನ್ ಟೊಮೆಟೋ ಹೊತ್ತೊಯ್ದಿದ್ದ ಕಳ್ಳರು!

tometo
22/07/2023

ಬೆಂಗಳೂರು: ನಾಲ್ವರು ಟೊಮೇಟೋ‌‌ ಕಳ್ಳರನ್ನು ಬಂಧಿಸುವಲ್ಲಿ ಆರ್‌ಎಂಸಿ ಯಾರ್ಡ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ದಿನಾಂಕ ಜುಲೈ 10 ರಂದು ರೈತರು ಚಿತ್ರದುರ್ಗದಿಂದ ಆರ್‍ ಎಂಸಿ ಯಾರ್ಡ್‍ಗೆ ಟೊಮೆಟೋ ಲೋಡ್  ನಿಲ್ಲಿಸಿ, ಟೀ ಕುಡಿಯಲು ಹೋಗಿದ್ದಾಗ ಕಳ್ಳರು ವಾಹನ ಸಮೇತವಾಗಿ 2 ಟನ್ ಟೊಮೆಟೋ ಹೊತ್ತೊಯ್ದಿದ್ದರು.ಕಾರಿನಲ್ಲಿ ಬಂದಿದ್ದ ಮೂವರು ವಾಹನವನ್ನು ಹೈಜಾಕ್ ಮಾಡಿದ್ದರು.

ಟೊಮೆಟೋ ತುಂಬಿದ್ದ ಗಾಡಿ ಫಾಲೋ ಮಾಡಿ ಬಂದ ಆರೋಪಿಗಳು, ಆರ್‍ಎಂಸಿ ಯಾರ್ಡ್ ಬಳಿ ಅಡ್ಡ ಹಾಕಿ ರೈತನಿಗೆ ಅವಾಜ್ ಹಾಕಿದ್ದರು. ಗಾಡಿ ಟಚ್ ಆಗಿದೆ ಎಂದು ನಾಟಕ ಮಾಡಿ ಡ್ರೈವರ್‍ ಗೆ ಥಳಿಸಿದ್ದು, ನಂತರ ರೈತನ ಮೇಲೂ ಹಲ್ಲೆ ಮಾಡಿ ಹಣ ಕೊಡು ಬೆದರಿಸಿದ್ದರು. ಬಳಿಕ ಆನ್‍ ಲೈನ್ ಮೂಲಕ ಹಣ ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಾಹನವನ್ನು ಕದ್ದೊಯ್ದಿದ್ದರು.

ನಾಲ್ವರು ಆರೋಪಿಗಳು ಬೆಂಗಳೂರಲ್ಲಿ ವಾಹನವನ್ನು ಕದ್ದು ಬಳಿಕ ಟೊಮೆಟೋವನ್ನು ಚೆನ್ನೈಗೆ ಸಾಗಿಸಿ ಮಾರಾಟ ಮಾಡಿದ್ದಾರೆ. ಬಳಿಕ ಖಾಲಿ ವಾಹನವನ್ನು ಪೀಣ್ಯ ಬಳಿ ನಿಲ್ಲಿಸಿ ಪರಾರಿಯಾಗಿದ್ದರು. ಕಳೆದ 11 ದಿನಗಳಿಂದಲೂ ಈ ಪ್ರಕರಣದ ಹಿಂದೆ ಪೊಲೀಸರು ಬಿದ್ದಿದ್ದು ಸಿಸಿಟಿವಿ ಆಧರಿಸಿ ಪೊಲೀಸರು  ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version