ಬೆಂಗಳೂರು ಗ್ರಾಮಾಂತರ: ನಿರುದ್ಯೋಗಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ; ಕೆನರಾ ಬ್ಯಾಂಕ್ ಸಂಸ್ಥೆಯಿಂದ ಅರ್ಜಿ ಆಹ್ವಾನ

beauty parlour
08/03/2026

ಹೊಸಕೋಟೆ: ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ 35 ದಿನಗಳ ಕಾಲ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ದಿನಾಂಕ 01/04/2026 ರಿಂದ ಆರಂಭವಾಗುವ ಈ ಶಿಬಿರದಲ್ಲಿ ಆಯ್ಕೆಯಾದ ಶಿಬಿರಾರ್ಥಿಗಳಿಗೆ ಉಚಿತ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳನ್ನು ಸಂಸ್ಥೆಯೇ ಕಲ್ಪಿಸಲಿದೆ. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಮಾನ್ಯತೆ ಪಡೆದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ವಯೋಮಿತಿ: 18 ರಿಂದ 45 ವರ್ಷದೊಳಗಿನ ಕರ್ನಾಟಕದ ಯಾವುದೇ ಜಿಲ್ಲೆಯ ಮಹಿಳೆಯರು ಭಾಗವಹಿಸಬಹುದು.

ಆದ್ಯತೆ: ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಭಾಷೆ: ಕನ್ನಡ ಓದಲು ಮತ್ತು ಬರೆಯಲು ಕಡ್ಡಾಯವಾಗಿ ತಿಳಿದಿರಬೇಕು.

ಆಸಕ್ತರು ತಮ್ಮ ವಿದ್ಯಾರ್ಹತೆ ಮತ್ತು ವಿಳಾಸದ ದಾಖಲಾತಿಗಳೊಂದಿಗೆ (ಆಧಾರ್ ಕಾರ್ಡ್, ರೇಷನ್ ಕಾರ್ಡ್, ಅಂಕಪಟ್ಟಿ ಇತ್ಯಾದಿ) ನೇರವಾಗಿ ಸಂದರ್ಶನಕ್ಕೆ ಹಾಜರಾಗಬೇಕು.

ದಿನಾಂಕ: 23/03/2026 (ಸೋಮವಾರ)

ಸಮಯ: ಬೆಳಿಗ್ಗೆ 10:00 ಗಂಟೆಗೆ

ಸ್ಥಳ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು.

ಹೆಸರು ನೋಂದಾಯಿಸಲು ಸಂಪರ್ಕಿಸಿ:

ಸಂದರ್ಶನಕ್ಕೆ ನೇರವಾಗಿ ಹಾಜರಾಗಲು ಅಸಾಧ್ಯವಾದವರು ದಿನಾಂಕ 23/03/2026 ರೊಳಗೆ ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ:

Ph: 8970476050, 9591514154, 9686248369, 6363139123, 9505894247


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version