ಬರೀ ಮಂಗಳೂರಿಗೆ ಖಾಸಗಿ ಬಸ್ ಗೆ ಫ್ರೀ ಕೊಡೋಕೆ ಆಗಲ್ಲ: ಸಚಿವ ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ವಹಿಸಿರುವುದು ಹೆಮ್ಮೆಯ ವಿಚಾರ. ಯೂತ್ ಕಾಂಗ್ರೆಸ್ ನಲ್ಲಿ ಇರುವಾಗಿನಿಂದ ಜಿಲ್ಲೆಯ ಜೊತೆ ಸಂಬಂಧ ಇದೆ. ಸ್ಥಳೀಯರೇ ಉಸ್ತುವಾರಿ ಆದರೆ ಒಳ್ಳೆಯದು. ಆದರೆ ಖಾದರ್ ಅವರು ಸಭಾಪತಿ ಆಗಿರೋದರಿಂದ ನನಗೆ ಈ ಜವಾಬ್ದಾರಿ ಸಿಕ್ಕಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುತ್ತೇವೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕೆಲಸ ಮಾಡಬೇಕು. ಪಕ್ಷಾತೀತವಾಗಿ ಕೆಲಸ ಮಾಡುವುದು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದ ಜವಾಬ್ದಾರಿ ಎಂದ ಅವರು, ಎಲ್ಲರ ಸಹಕಾರ ಪಡೆದು ಜಿಲ್ಲೆಯ ಅಭಿವೃದ್ಧಿ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಅಭಿವೃದ್ಧಿ ಕೆಲಸ ಆಗುವುದಿಲ್ಲ. ಜಿಲ್ಲಾಡಳಿತ ಸದ್ಯ ಮಳೆಗಾಲ ಎದುರಿಸಲು ಸಜ್ಜಾಗಬೇಕು. ಅದಕ್ಕೆ ಬೇಕಾದ ಎಲ್ಲಾ ಸಹಕಾರ ಸರಕಾರದಿಂದ ನೀಡಲಾಗುತ್ತದೆ. ಮುಂದಿನ ವಾರ ಜಿಲ್ಲೆಗೆ ಬಂದು ಎಲ್ಲಾ ಜನಪ್ರತಿನಿಧಿ, ಅಧಿಕಾರಿಗಳ ಜತೆಗೆ ಪ್ರಗತಿಪರಿಶೀಲನೆ ಸಭೆ ಕರೆಯುತ್ತೇನೆ ಎಂದು ಹೇಳಿದರು.
ದ.ಕ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳದ್ದೇ ಪ್ರಾಬಲ್ಯವಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಹಿಳೆಯರಿಗೆ ಉಚಿತ ಪ್ರಯಾಣ ನಾವು ಘೋಷಣೆ ಮಾಡಿದಾಗ ಈ ಯೋಜನೆ ಆಗುತ್ತಾ ಇಲ್ವಾ ಎಂದು ಕೇಳಿದ್ದರು. ಕಾಂಗ್ರೆಸ್ ಸುಮ್ಮನೆ ಘೋಷಣೆ ಮಾಡುತ್ತಿದೆ ಎಂದು ಹೇಳಿದ್ದರು. ಆದರೆ ಸರಕಾರ ನುಡಿದಂತೆ ನಡೆದಿದೆ. ಖಾಸಗಿಗೆ ಈ ಯೋಜನೆ ವಿಸ್ತೀರ್ಣ ಮಾಡಲು ಆಗಲ್ಲ. ಈ ಯೋಜನೆ ಸರ್ಕಾರಿ ಬಸ್ ಗಳಿಗೆ ಮಾತ್ರ ಸಿಮೀತವಾಗಿದೆ. ಬರೀ ಮಂಗಳೂರಿಗೆ ಖಾಸಗಿ ಬಸ್ ಗೆ ಫ್ರೀ ಕೊಡೋಕೆ ಆಗಲ್ಲ. ವಿಸ್ತೀರ್ಣ ಮಾಡಿದರೆ ಇಡೀ ಕರ್ನಾಟಕಕ್ಕೆ ನೀಡಬೇಕು ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























