ನಿರುದ್ಯೋಗಿಗಳಿಗೆ ಉತ್ತಮ ಅವಕಾಶ: ಉಚಿತ ಅಣಬೆ ಬೇಸಾಯ ತರಬೇತಿ - Mahanayaka

ನಿರುದ್ಯೋಗಿಗಳಿಗೆ ಉತ್ತಮ ಅವಕಾಶ: ಉಚಿತ ಅಣಬೆ ಬೇಸಾಯ ತರಬೇತಿ

mushroom farming
11/09/2025

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ  ಯುವಕ–ಯುವತಿಯರಿಗೆ 10 ದಿನಗಳ ಕಾಲಾವಧಿಯ ಉಚಿತ ಅಣಬೆ ಬೇಸಾಯ(Mushroom Farming) ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 15—09–2025 ರಂದು ಸೋಮವಾರ ಸಂಸ್ಥೆಯಲ್ಲಿ ನಡೆಯುವ ಸಂದರ್ಶನದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.

ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.

ಗ್ರಾಮೀಣ ಭಾಗದ ಬಿ.ಪಿ.ಎಲ್.ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 9686248369 ಸಂಪರ್ಕಿಸಬಹುದಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ