ಆಧುನಿಕ ಹೈನುಗಾರಿಕೆ ಉಚಿತ ತರಬೇತಿ | ಅವಕಾಶ ಸದುಪಯೋಗಪಡಿಸಿಕೊಳ್ಳಿ! - Mahanayaka

ಆಧುನಿಕ ಹೈನುಗಾರಿಕೆ ಉಚಿತ ತರಬೇತಿ | ಅವಕಾಶ ಸದುಪಯೋಗಪಡಿಸಿಕೊಳ್ಳಿ!

31/10/2020

ದಾವಣಗೆರೆ: ಪಶುಪಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶುಆಸ್ಪತ್ರೆ ಆವರಣದಲ್ಲಿರುವ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರದಲ್ಲಿ ನ.4 ರಿಂದ 6 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 3 ದಿನಗಳ ಆಧುನಿಕ ಹೈನುಗಾರಿಕೆ ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಆಸಕ್ತ ರೈತರು, ಮಹಿಳೆಯರು, ನಿರುದ್ಯೋಗ ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು. ತರಬೇತಿ ಅವಧಿಯಲ್ಲಿ ಯಾವುದೇ ಊಟ, ವಸತಿ ಸೌಕರ್ಯದ ವ್ಯವಸ್ಥೆ ಇರುವುದಿಲ್ಲ. ತರಬೇತಿ ಪಡೆಯಲು 35 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್, 2 ಭಾವಚಿತ್ರ ಹಾಗೂ ಪ.ಜಾತಿ/ಪ.ಪಂಗಡದವರು ಜಾತಿ ಪ್ರಮಾಣ ಪತ್ರದ ಪ್ರತಿ ನೀಡಬೇಕು.


ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ, ದಾವಣಗೆರೆ ದೂ.ಸಂ: 08192-233787 ನ್ನು ಸಂಪರ್ಕಿಸಬಹುದೆಂದು ಪಶುವೈದ್ಯಕೀಯ ಸಹಾಯಕ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ