ಮಹಿಳೆಯರಿಗೆ ಉಚಿತ ಪ್ರಯಾಣ ಐದು ವರ್ಷ ಅಲ್ಲ, 10 ವರ್ಷವೂ ಫ್ರೀ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ʼಶಕ್ತಿʼ ಯೋಜನೆ 10 ವರ್ಷವೂ ಉಚಿತ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ವಿಧಾನಸೌಧದಲ್ಲಿ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಈ ಐದು ವರ್ಷ ಮುಗಿದ ಬಳಿಕವೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.ಹೀಗಾಗಿ 10 ವರ್ಷವೂ ಉಚಿತ ಕೊಡುತ್ತೆವೆ ಎಂದು ಭರವಸೆ ನೀಡಿದರು
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಒಂದೇ ವರ್ಷ ಇರೋದು ಅಂತ ಬಿಜೆಪಿಯವರು ಹೇಳುತ್ತಾರೆ. ಆದರೆ ಈ ಯೋಜನೆ 5 ವರ್ಷ ಪೂರ್ತಿ ಇರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.
ಬಸ್ ಸ್ಟಾಪ್ ಇರೋ ಕಡೆ ಬಸ್ ಕಡ್ಡಾಯವಾಗಿ ನಿಲ್ಲಿಸಬೇಕು. ನಮ್ಮ ಇಲಾಖೆಗೆ ಒಳ್ಳೆ ಹೆಸರು ತರಬೇಕು. ನನ್ನ ಅವಧಿಯಲ್ಲಿ 203 ಪ್ರಶಸ್ತಿ ಇಲಾಖೆಗೆ ಬಂದಿತ್ತು. ಬಿಜೆಪಿ ಅವಧಿಯಲ್ಲಿ 50 ಪ್ರಶಸ್ತಿ ಮಾತ್ರ ಬಂದಿದೆ. ಕಾರ್ಪೋರೇಷನ್ ನಷ್ಟದಲ್ಲಿ ಇದೆ, ಹೇಗೆ ನಡೆಸುತ್ತಾರೆ ಅಂತ ಹೇಳ್ತಾರೆ. ಪ್ರತಿ ತಿಂಗಳು ಲೆಕ್ಕ ಕೊಡ್ತೀವಿ. ಎಷ್ಟು ಜನ ಓಡಾಡುತ್ತಾರೆ ಅಂತ ಲೆಕ್ಕ ಕೊಡ್ತೀವಿ. ಮಹಿಳೆಯರ ಸಬಲೀಕರಣಕ್ಕೆ ಈ ಯೋಜನೆ ಜಾರಿ ಮಾಡಿದ್ದೇವೆ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 20 ದಿನ ಆಗಿದೆ. ನುಡಿದಂತೆ ನಡೆಯುವ ಸರ್ಕಾರ ಇದ್ದರೆ ದೇಶದಲ್ಲಿ ಅದು ಕಾಂಗ್ರೆಸ್ ಸರ್ಕಾರ. ನುಡಿದಂತೆ ನಡೆಯೋದು ನಮಗೆ ಹೊಸದಲ್ಲ. 2013 ರಲ್ಲಿ 165 ಭರವಸೆಗಳಲ್ಲಿ ಪೈಕಿ 158 ಭರವಸೆ ಈಡೇರಿಸಿದ್ದೇವೆ. 2018 ರಲ್ಲಿ ಸೋತೆವು. ಬಿಜೆಪಿ 600 ಆಶ್ವಾಸನೆ ಕೊಟ್ಟಿದ್ದು ಆದರೆ ಅದರಲ್ಲಿ 60 ಮಾತ್ರ ಈಡೇರಿಕೆ ಮಾಡಿದ್ದಾರೆ. ಬಿಜೆಪಿಗೂ ನಮಗೂ ಅಜಗಜಾಂತರ ವ್ಯತ್ಯಾಸ ಇದೆ. ನಾವು ನುಡಿದಂತೆ ನಡೆಯುತ್ತೇವೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw