ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿ
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ–ಮಹಿಳೆಯರಿಗಾಗಿ 30 ದಿನಗಳ ಕಾಲಾವಧಿಯ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನ ಪುರುಷರು 20–11–2025 ಗುರುವಾರದಂದು ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿ ನಡೆಯುತ್ತಿದ್ದು, ಆಸಕ್ತರು ಪಡಿತರ ಚೀಟಿ, ಆಧಾರ್ ಕಾರ್ಡ್, 4 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ. ಗ್ರಾಮೀಣ ಭಾಗದ ಬಿ.ಪಿ.ಎಲ್.ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9505894247, 9591514154, 8970476050, 9686248369. ಸಂಪರ್ಕಿಸಬಹುದಾಗಿದೆ. ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಲಿಂಕ್: https://docs.google.com/forms/d/e/1FAIpQLScttLp4qkdzhidYKn71_YjlyizVQP3nUUx-388akDMpZFzrOA/viewform?usp=sharing&ouid=116915943280505042190
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























