ಪಿಎಫ್ ಐ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ಆರೋಪ: ಫ್ರೀಡಂ ಕಮ್ಯುನಿಟಿ ಹಾಲ್  ಎನ್ ಐಎ ವಶಕ್ಕೆ - Mahanayaka
5:10 PM Wednesday 3 - September 2025

ಪಿಎಫ್ ಐ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ಆರೋಪ: ಫ್ರೀಡಂ ಕಮ್ಯುನಿಟಿ ಹಾಲ್  ಎನ್ ಐಎ ವಶಕ್ಕೆ

freedom community hall
23/02/2023


Provided by

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫ್ರೀಡಂ ಎಜ್ಯುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಒಡೆತನಕ್ಕೆ ಸೇರಿದ  ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಎನ್ ಐಎ ಕಾನೂನುಬದ್ಧವಾಗಿ ವಶಕ್ಕೆ  ಪಡೆದುಕೊಂಡಿದೆ.

1967ರ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಕಲಂ 25ರ ಅನ್ವಯ ಪಿಎಫ್ ಐ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದೆ ಎಂದು ಆರೋಪಿಸಿ ಕೃತ್ಯಕ್ಕೆ ಬಳಸಿದ ಹಾಲ್ ಸಹಿತ ಜಾಗವನ್ನು ಎನ್ ಐಎ ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದೆ.

ಜಮೀನನ್ನು ಬೇರೆಯವರಿಗೆ ಮಾರಾಟ ಮಾಡುವ, ವರ್ಗಾವಣೆ ಮಾಡುವ, ಲೀಸ್ ಮಾಡುವ ಹಾಗೂ ಇನ್ಯಾವುದೇ ರೀತಿಯ ಬದಲಾವಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಬೆಂಗಳೂರು ವಿಭಾಗ ಎನ್.ಐ.ಎ ಮುಖ್ಯ ತನಿಖಾಧಿಕಾರಿ ಷಣ್ಮುಗಂ ಎಂ. ಅವರು ಪ್ರೀಡಂ ಎಜ್ಯುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಅವರಿಗೆ ನೋಟೀಸ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ