ಪವಿತ್ರಾ ಜಯರಾಂ ಸಾವಿನ ಬೆನ್ನಲ್ಲೇ ಗೆಳೆಯ ಚಂದು ಸಾವಿಗೆ ಶರಣು!

ಕಿರುತೆರೆ ನಟಿ ಪವಿತ್ರಾ ಜಯರಾಂ ಅವರ ಸಾವಿನಿಂದ ನೊಂದು ತೆಲುಗು ಕಿರುತೆರೆ ನಟ ಚಂದು ತಮ್ಮ ಬದುಕು ಮುಗಿಸಿದ್ದು, ತಮ್ಮ ಮಣಿಕೊಂಡದಲ್ಲಿರುವ ಫ್ಲ್ಯಾಟ್ ನಲ್ಲಿ ಸಾವಿಗೆ ಶರಣಾಗಿದ್ದಾರೆ.
ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪವಿತ್ರಾ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದರು. ಅಲ್ಲದೇ, ನಿಮ್ಮನ್ನು ಮರೆಯಲು ಸಾಧ್ಯವಿಲ್ಲ, ನಮ್ಮ ಜಿಮ್ ಕೋಚ್ ಕರೆ ಮಾಡುತ್ತಿದ್ದಾರೆ, ಜಿಮ್ ಗೆ ಹೋಗೋಣ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ಪವಿತ್ರಾ ಜಯರಾಂ ಮತ್ತು ಚಂದು ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರ ಕಾರು ಅಪಘಾತವಾಗಿತ್ತು. ಚಂದು ಕಣ್ಣೆದುರೇ ಪವಿತ್ರಾ ಸಾವನ್ನಪ್ಪಿದ್ದರು. ಈ ಘಟನೆಯಿಂದ ಚಂದು ಶಾಕ್ ಗೊಳಗಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068