ಬಾಲ್ಯ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಸ್ನೇಹಿತರು! - Mahanayaka

ಬಾಲ್ಯ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಸ್ನೇಹಿತರು!

huballi
23/03/2024


Provided by

ಹುಬ್ಬಳ್ಳಿ: ಬಾಲ್ಯ ಸ್ನೇಹಿತನನ್ನು ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ನಾಗಶೆಟ್ಟಿ ಕೊಪ್ಪದಲ್ಲಿ ನಡೆದಿದೆ.

ಮೃತನನ್ನು ಪ್ರಕಾಶ್ ಮಾನೆ ಎಂದು ಗುರುತಿಸಲಾಗಿದೆ. ಮೃತನ ಬಾಲ್ಯ ಸ್ನೇಹಿತರಾದ ಕಿರಣ್ ಬಡಿಗೇರ ಹಾಗೂ ಸಂಗಮೇಶ ಜೊತೆ ಸೇರಿ ಪ್ರಕಾಶ್ ನ ಹೊಟ್ಟೆಗೆ ಚಾಕುವಿನಿಂದ ಇರಿದು ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿhttps://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ