ನನ್ನ ಬಂಧನದ ಹಿಂದೆ ಸರ್ವಾಧಿಕಾರದ ಧೋರಣೆ: ಅರವಿಂದ್ ಕೇಜ್ರಿವಾಲ್ ಆರೋಪ

ನನ್ನನ್ನು ಬಂಧಿಸುವ ಮೂಲಕ ಅವರು ಯಾರನ್ನು ಬೇಕಾದರೂ ಬಂಧಿಸಬಲ್ಲರೆಂಬ ಸಂದೇಶ ನೀಡಿದ್ದಾರೆ. ಈ ಮಿಷನ್ ಹೆಸರು “ಒಂದು ದೇಶ ಒಂದು ನಾಯಕ” ಹೀಗೆಂದು ಹೇಳಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ , ವಿಪಕ್ಷ ಆಡಳಿತದ ಎಲ್ಲಾ ಮುಖ್ಯಮಂತ್ರಿಗಳನ್ನು ಜೈಲಿಗೆ ತಳ್ಳಿ ಸರಕಾರವನ್ನು ಬುಡಮೇಲು ಮಾಡುವುದು ಇವರ ಉದ್ದೇಶ ಎಂದು ಆರೋಪಿಸಿದ್ದಾರೆ.
ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನಿಂದ ಮಧ್ಯಂತರ ಜಾಮೀನು ಪಡೆದು ಶುಕ್ರವಾರ ಜೈಲಿನಿಂದ ಬಿಡುಗಡೆಗೊಂಡ ನಂತರ ಇಂದು ತಮ್ಮ ಮೊದಲ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್ ಅವರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿಯೊಳಗೆ ಅಧಿಕಾರ ಕೇಂದ್ರೀಕರಣದ ಹಿಂದೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇದ್ದಾರೆಂದು ಹೇಳಿದ ಕೇಜ್ರಿವಾಲ್, ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ ಹಲವು ರಾಜ್ಯಗಳಲ್ಲಿ ಸಿಎಂ ಬದಲಾವಣೆ ಮಾಡುವ ಮೂಲಕ ಅವರನ್ನು ಹದ್ದುಬಸ್ತಿನಲ್ಲಿಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth