ರಾಹುಲ್ ಗಾಂಧಿ ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ?: ಕೊನೆಗೂ ಸಿಕ್ಕಿತು ಸ್ಪಷ್ಟನೆ!

27/01/2024
ಕೋಝಿಕ್ಕೋಡ್: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಬಗ್ಗೆ ಕುತೂಹಲ ಮೂಡಿತ್ತು. ಇದೀಗ ಕಾಂಗ್ರೆಸ್ ಸಂಸದ ಕೆ.ಮುರಳೀಧರನ್ ಈ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಕ್ಷೇತ್ರದಿಂದಲೇ ಈ ಬಾರಿಯೂ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಕೆ.ಮುರಳೀಧರನ್ ಶುಕ್ರವಾರ ತಿಳಿಸಿದ್ದಾರೆ.
ರಾಹುಲ್ ಗಾಂಧಿ ವಯನಾಡ್ ನಿಂದಲೇ ಸ್ಪರ್ಧಿಸಲಿದ್ದಾರೆ. ಅದರಲ್ಲಿ ಯಾವುದೇ ಬದಲಾವಣೆಗಳಿಲ್ಲ, ಈಗ ಇರುವ ವ್ಯವಸ್ಥೆಯೇ ಮುಂದುವರಿಯಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಕಣ್ಣೂರು ಹೊರತುಪಡಿಸಿ ಕೇರಳದ ಎಲ್ಲಾ ಹಾಲಿ ಸಂಸದರು ಅದೇ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ನಿರೀಕ್ಷೆ ಇದೆ ಎಂದು ಕೆ.ಮುರಳೀಧರನ್ ತಿಳಿಸಿದ್ದಾರೆ.