ತೂಕ ಇಳಿಸಲು ಸಹಾಯ ಮಾಡುವ ಹಣ್ಣುಗಳಿವು - Mahanayaka

ತೂಕ ಇಳಿಸಲು ಸಹಾಯ ಮಾಡುವ ಹಣ್ಣುಗಳಿವು

whaite
17/04/2024

ಹಣ್ಣುಗಳು ನಮ್ಮ ಆರೋಗ್ಯಕ್ಕೆ ಉತ್ತಮವಾಗಿದ್ದರೂ ಕೂಡ, ಸಕ್ಕರೆ ಅಂಶ ಅಧಿಕ ಇರುವ ಹಣ್ಣುಗಳಲ್ಲಿ ಕ್ಯಾಲೊರಿ ಅಂಶ ಹೆಚ್ಚು ಇರುವ ಕಾರಣ ಅದು ದೇಹದ ತೂಕ ಹೆಚ್ಚು ಮಾಡುತ್ತವೆ. ನೀವು ತೂಕ ಇಳಿಸಿಕೊಳ್ಳಲು ಬಯಸುವುದೇ ಆದರೆ, ಕಡಿಮೆ ಸಕ್ಕರೆ ಅಂಶ ಇರುವ ಈ ಹಣ್ಣುಗಳನ್ನು ನಿಮ್ಮ ಆಹಾರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಳ್ಳಬಹುದು.

ಸ್ಟ್ರಾಬೆರಿ:

ಇದರಲ್ಲಿ ನಾರಿನ ಅಂಶ ಹೆಚ್ಚಿದ್ದು, ಸಕ್ಕರೆ ಅಂಶ ಕಡಿಮೆ ಇರುತ್ತದೆ. ವಿಟಮಿನ್ ಸಿ ಸಮೃದ್ಧವಾಗಿದ್ದು, ಚಯಾಪಚಯ ಕ್ರಿಯೆ ವೃದ್ಧಿಯಾಗಲು ಸಹಾಯ ಮಾಡುತ್ತದೆ. ಈ ಮೂಲಕ ತೂಕ ಇಳಿಕೆಗೆ ನೆರವಾಗುತ್ತದೆ.

ಕಿವಿ ಫ್ರೂಟ್:

ಕಿವಿ ಫ್ರೂಟ್ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಸಕ್ಕರೆಯಂಶ ಕಡಿಮೆ ಇರುತ್ತದೆ. ಹಾಗಾಗಿ ತೂಕ ಇಳಿಕೆಗೆ ಹೇಳಿ ಮಾಡಿಸಿದ ಹಣ್ಣು ಎನ್ನುವುದಲ್ಲಿ ಅನುಮಾನವಿಲ್ಲ. ಇದು ಚಯಾಪಚಯವನ್ನು ಹೆಚ್ಚಿಸಿ, ತೂಕ ಇಳಿಕೆಗೆ ನೆರವಾಗುತ್ತದೆ.

ಚಕ್ಕೊತಾ:

ಚಕ್ಕೊತಾ ಹಣ್ಣಿನಲ್ಲಿ ಸಕ್ಕರೆ ಅಂಶ ಕಡಿಮೆ ಇರುತ್ತದೆ. ನಾರಿನಾಂಶ, ವಿಟಮಿನ್ ಸಿ, ಸಿಟ್ರಿಕ್ ಆಸಿಡ್ ಹೇರಳವಾಗಿರುವ ಕಾರಣ ಇದು ಜೀರ್ಣಕ್ರಿಯೆಯನ್ನು ವೃದ್ಧಿಸಿ ತೂಕ ಇಳಿಸಲು ಸಹಾಯ ಮಾಡುತ್ತದೆ.

ಕಿತ್ತಳೆ:

ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಹಾಗೂ ನಾರಿನಾಂಶ ಸಮೃದ್ಧವಾಗಿದ್ದು, ಇದು ಕ್ಯಾಲೊರಿ ಸೇವನೆಗೆ ಕಡಿವಾಣ ಹಾಕುತ್ತದೆ. ಇದು ತೂಕ ಇಳಿಕೆಗೆ ಸಹಾಯ ಮಾಡುವ ಜೊತೆಗೆ ರಕ್ತದಲ್ಲಿನ ಸಕ್ಕರೆ ಅಂಶದ ನಿಯಂತ್ರಣಕ್ಕೂ ಕಾರಣವಾಗುತ್ತದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿhttps://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ