ಖಾಸಗಿ ಸಂಸ್ಥೆ ಸಂಸ್ಥೆಯ ಎಫ್ ಎಸ್ ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ: ಗೃಹ ಸಚಿವೆ ಜಿ.ಪರಮೇಶ್ವರ್

ಬೆಂಗಳೂರು: ಖಾಸಗಿ ಸಂಸ್ಥೆಯವರು ನೀಡಿರುವ ಎಫ್ ಎಸ್ ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವೆ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಪರ ಘೋಷಣೆ ವಿಚಾರದಲ್ಲಿ ಬಿಜೆಪಿಯ ಖಾಸಗಿ ಎಫ್ ಎಸ್ ಎಲ್ ವರದಿಯ ವಿಚಾರದಲ್ಲಿ ಅವರು ಪ್ರತಿಕ್ರಿಯೆ ನೀಡಿದರು.
ಸರ್ಕಾರದ ಎಫ್ ಎಸ್ ಎಲ್, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಧೃಡವಾಗಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಇನ್ನು ಎಫ್ ಎಸ್ ಎಲ್ ವರದಿ ಘಟನೆ ನಡೆದ ಮರುದಿನವೆ ಬಂದಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಜಿ. ಪರಮೇಶ್ವರ್, ಅವರು ಯಾವ ಅಧಾರದ ಮೇಲೆ ಹೇಳಿದ್ದಾರೆ ಗೊತ್ತಿಲ್ಲ. ಇದು ನಮ್ಮ ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳುತ್ತೇನೆ ಎಂದರು.
ಖಾಸಗಿಯವರಿಗೆ ಈ ರೀತಿ ವರದಿ ಕೊಡಲು ಅನುಮತಿ ಇದೆಯಾ? ಅವರಿಗೆ ಎನ್ ಒಸಿ ಯಾರು ಕೊಟ್ಟಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇನೆ ಎಂದರು.