ಭರವಸೆಗಳನ್ನು ಜಾರಿಗೊಳಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ - Mahanayaka
11:46 PM Thursday 21 - August 2025

ಭರವಸೆಗಳನ್ನು ಜಾರಿಗೊಳಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ

karnataka congress
18/05/2023


Provided by

ಬೆಂಗಳೂರು: 6.5 ಕೋಟಿ ಕನ್ನಡಿಗರಿಗೆ  ನೀಡಿದ 5 ಭರವಸೆಗಳನ್ನು ಜಾರಿಗೊಳಿಸುತ್ತೇವೆಂದು  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಿ, ಘೋಷಣೆ ಮಾಡಿದ ಬೆನ್ನಲ್ಲೇ ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ  ಎಂದು  ಟ್ವೀಟ್ ಮಾಡಿದ್ದಾರೆ.

ಇನ್ನು ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಟ್ವೀಟ್ ಮಾಡಿ ಡಿಕೆಶಿ ಹಾಗೂ ಖರ್ಗೆ ಅವರೊಂದಿಗಿನ ಫೋಟೋವನ್ನು ಘೋಷಿತ ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ