ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಜರ್ಮನಿಗೆ! - Mahanayaka

ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಜರ್ಮನಿಗೆ!

modi
25/06/2022

ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ನಾಳೆ ಜರ್ಮನಿಗೆ ತೆರಳಲಿದ್ದಾರೆ.   ಶೃಂಗಸಭೆಯು ಜರ್ಮನಿಯ ಸ್ಕ್ಲೋಸ್ ಎಲ್ಮೋದಲ್ಲಿ ನಡೆಯಲಿದೆ.  ಪ್ರಧಾನಿಯವರು ಪರಿಸರ, ಇಂಧನ, ಹವಾಮಾನ, ಆಹಾರ ಭದ್ರತೆ, ಆರೋಗ್ಯ, ಲಿಂಗ ಸಮಾನತೆ ಮತ್ತು ಪ್ರಜಾಪ್ರಭುತ್ವದ ಕುರಿತು ಎರಡು ಅಧಿವೇಶನಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.

ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಜೂನ್ 28 ರಂದು ಯುಎಇಗೆ ತೆರಳಲಿದ್ದಾರೆ.  ಯುಎಇಯ ಮಾಜಿ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ ಸೂಚಿಸಲಿದ್ದಾರೆ.  ನೂತನ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಅಭಿನಂದಿಸಲು ಮೋದಿಅವರು ಯುಎಇಗೆ ತೆರಳಲಿದ್ದಾರೆ.

ನೂಪುರ್ ಶರ್ಮಾ ಅವರ ನಬಿ ವಿರೋಧಿ ಹೇಳಿಕೆಯನ್ನು ವಿರೋಧಿಸಿ ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳು ಪ್ರತಿಭಟನೆ ನಡೆಸುತ್ತಿವೆ.ಇದರ ಬೆನ್ನಲ್ಲೇ ಮೋದಿ ಭೇಟಿಯೂ ನಡೆಯಲಿದೆ.  28ರ ರಾತ್ರಿಯೇ ಯುಎಇಯಿಂದ ಪ್ರಧಾನಿ ವಾಪಸಾಗಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತರಕಾರಿ ಮಾರಾಟದ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕ ಅರೆಸ್ಟ್

ಇಡಿ ಮುಂದೆ ಹಾಜರಾಗಲು ರಾಹುಲ್ ಗಾಂಧಿ ನಾಟಕ ಆಡುತ್ತಿದ್ದಾರೆ: ಅಮಿತ್ ಶಾ

ಮದುವೆ ಸಂಭ್ರಮದಲ್ಲಿ ಗುಂಡು ಹಾರಿಸಿದ ವರ: ಅತಿಥಿ ಸಾವು

ಇಂಗ್ಲಿಷ್ ಮಾತನಾಡದಿದ್ದಕ್ಕೆ 4 ವರ್ಷದ ಬಾಲಕನಿಗೆ ಥಳಿತ: ಶಿಕ್ಷಕ ಅರೆಸ್ಟ್

ಗೃಹಪ್ರವೇಶದ ಮನೆಗೆ ನುಗ್ಗಿ 25 ಸಾವಿರ ಹಣಕ್ಕೆ ಬೇಡಿಕೆಯಿಟ್ಟು ಮಂಗಳಾಮುಖಿಯರಿಂದ ದಾಂಧಲೆ

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ