2:39 PM Wednesday 15 - October 2025

ಶಾಸಕ ಜಿ.ಟಿ. ದೇವೇಗೌಡರ ಮೊಮ್ಮಗಳು ನಿಧನ: ಕಂಬನಿ ಮಿಡಿದ ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿ.ಕೆ.ಶಿ.

g t devegowda
15/05/2022

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದು, 6 ತಿಂಗಳಿನಿಂದ ಬೋನ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.

ಜಿ.ಟಿ.ಹರೀಶ್ ಗೌಡ ಪುತ್ರಿಯಾಗಿರುವ  ಗೌರಿ ಮೃತಪಟ್ಟ ಬಾಲಕಿಯಾಗಿದ್ದು, ಬಾಲಕಿಯ ಸಾವಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ,  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಮಾಜಿ ಸಚಿವರು, ಆತ್ಮೀಯರು ಆದ ಜಿ.ಟಿ ದೇವೇಗೌಡರ ಮೊಮ್ಮಗಳು ಗೌರಿ ಸಾವಿನ ಸುದ್ದಿ ತಿಳಿದು ಅತೀವ ಸಂಕಟವಾಯಿತು. ಬದುಕಿ ಬಾಳಬೇಕಿದ್ದ ಎಳೆಯ ಕಂದಮ್ಮನ ಅಗಲಿಕೆಯಿಂದ ನೊಂದಿರುವ ಜಿ.ಟಿ ದೇವೇಗೌಡರ ಕುಟುಂಬದ ಶೋಕದಲ್ಲಿ ನಾನೂ ಭಾಗಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಶಾಸಕರಾದ ಜಿ.ಟಿ ದೇವೇಗೌಡರ ಅವರ 3 ವರ್ಷದ ಮೊಮ್ಮಗಳು ಗೌರಿಯ ನಿಧನದ ಸುದ್ದಿ ಕೇಳಿ ನಿಜಕ್ಕೂ ಮನಸ್ಸಿಗೆ ನೋವುಂಟಾಯಿತು. ಬದುಕು ಕೆಲವೊಮ್ಮೆ ತುಂಬಾ ಅನಿಶ್ಚಿತ ಮತ್ತು ಕ್ರೂರ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸುವ ಶಕ್ತಿಯನ್ನು ದೇವರು ಆ ಕುಟುಂಬಕ್ಕೆ ಕೊಡಲಿ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಮಾಜಿ ಮಂತ್ರಿಗಳಾದ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಾಯಕರ ಪಟ್ಟಿ ಕೊಡುತ್ತೇವೆ, ಯಾರನ್ನು ಬೇಕಾದರೂ ಕರೆದುಕೊಂಡು ಹೋಗಿ: ಸಿಎಂ ಇಬ್ರಾಹಿಂ

ಮತ್ತೋರ್ವ ಕ್ರಿಕೆಟ್ ಆಟಗಾರ ನಿಧನ: ಅಪಘಾತಕ್ಕೆ ಬಲಿಯಾದ ಆ್ಯಂಡ್ರೋ ಸೈಮಂಡ್ಸ್

ಖ್ಯಾತ ನಟ ಕಮಲ್ ಹಾಸನ್ ವಿರುದ್ಧ ಹೊಸ ವಿವಾದ

ಅವಧಿಗೂ ಮುನ್ನ ಮುಂಗಾರು ಪ್ರವೇಶ ಸಾಧ್ಯತೆ!

ಇತ್ತೀಚಿನ ಸುದ್ದಿ

Exit mobile version