ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ: ತಹಶೀಲ್ದಾರ್ ಅಜಿತ್​ ರೈ ಬಂಧನ - Mahanayaka
10:01 PM Thursday 21 - August 2025

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ: ತಹಶೀಲ್ದಾರ್ ಅಜಿತ್​ ರೈ ಬಂಧನ

ajith rai
29/06/2023


Provided by

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವ ಹಿನ್ನೆಲೆ ಲೋಕಾಯುಕ್ತ‌ ಬಲೆಗೆ ಬಿದ್ದಿದ್ದ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್​ ರೈ ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, 4 ಗಂಟೆಗಳ ಒಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಅಜಿತ್​ ರೈಗೆ ಸಂಬಂಧಿಸಿದ 10 ಸ್ಥಳಗಳಿಗೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳನ್ನು, ಐಷಾರಾಮಿ ಕಾರು ಮತ್ತು ಬೈಕ್ ​ಗಳನ್ನು ವಶಕ್ಕೆ ಪಡೆದಿದ್ದರು.

ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿದ್ದು, ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಬೇನಾಮಿ ಹೆಸರಿನಲ್ಲಿ ಅಜಿತ್​ ರೈ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆ ಬೆಳಗ್ಗೆ ಅಜಿತ್ ರೈ ನಿವಾಸದ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಸತತ 30 ಗಂಟೆಗಳ ಶೋಧ ನಡೆಸಿ ಲಭ್ಯವಾದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ