ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ: ನಾಡಹಬ್ಬಕ್ಕೆ ಆಗಮಿಸುವ ಆನೆಗಳ ಹೆಸರು ಇಲ್ಲಿದೆ - Mahanayaka

ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ: ನಾಡಹಬ್ಬಕ್ಕೆ ಆಗಮಿಸುವ ಆನೆಗಳ ಹೆಸರು ಇಲ್ಲಿದೆ

mysore dasara
21/08/2024


Provided by

ಮೈಸೂರು: ನಾಗರಹೊಳೆಯ ವೀರನಹೊಸಹಳ್ಳಿ ಗೇಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ: ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ. ಆಗಸ್ಟ್‌ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.

ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ

ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್‌ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ