6:54 PM Saturday 18 - October 2025

ಕೇಂದ್ರ ಗಣರಾಜ್ಯೋತ್ಸವ ಸಮಿತಿಯಿಂದ ನಾರಾಯಣ ಗುರುಗಳ ಚಿತ್ರದ ಸ್ತಬ್ಧಚಿತ್ರ ತಿರಸ್ಕಾರ: ಎಚ್‌ಡಿಕೆ ಆಕ್ರೋಶ

kumara swamy
15/01/2022

ಬೆಂಗಳೂರು: ಕೇಂದ್ರದ ಗಣರಾಜ್ಯೋತ್ಸವ ಸಮಿತಿ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತಭೇದಗಳನ್ನು ಧಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಶ್ರೀ ನಾರಾಯಣ ಗುರುಗಳು, ಮನುಷ್ಯರೆಲ್ಲ ಒಂದೇ ಎಂದು ಹೇಳಿ ಒಂದೇ ಜಾತಿ, ಒಂದೇ ಮತ, ಒಬ್ಬರೇ ದೇವರು ಎಂದು ಸಾರಿ ಆತ್ಮದಲ್ಲಿ ಅರಿವಿನ ಬೆಳಕು ಮೂಡಿಸಿದವರು. ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ. ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್‌ಗೆ ಸಮಿತಿಯು ಅಂಗೀಕಾರ ಮಾಡಬೇಕು. ಕೂಡಲೇ ಸಂಬಂಧಪಟ್ಟ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕು ಎಂದು ಎಚ್‌.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಮಾಜವಾದಿ ಪಾರ್ಟಿಗೆ ನೀಡಿದ್ದ ಬೆಂಬಲ ವಾಪಸ್ ಪಡೆದ ಭೀಮ್ ಆರ್ಮಿ

ವೈದ್ಯಕೀಯ ಚಿಕಿತ್ಸೆಗಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅಮೆರಿಕಕ್ಕೆ

ಕ್ರೀಡಾಳುಗಳಿಗೆ ಪಠ್ಯಕ್ರಮದಂತೆ ಸೂಕ್ತ ಮಾರ್ಗದರ್ಶನ ನೀಡಬೇಕಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಪೊಲೀಸರ ವೇಷದಲ್ಲಿ ಮನೆಗೆ ದಾಳಿ ನಡೆಸಿ ಚಿನ್ನಾಭರಣ ದೋಚಿದ ಕಳ್ಳರು!

ಬಾಗ್ದಾದ್: ಯುಎಸ್ ರಾಯಭಾರ ಕಚೇರಿಯ ಮೇಲೆ ರಾಕೆಟ್ ದಾಳಿ

 

ಇತ್ತೀಚಿನ ಸುದ್ದಿ

Exit mobile version