ಸರ್ಕಾರಿ ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಆಕ್ಷೇಪ ವ್ಯಕ್ತಪಡಿಸಿದರೆ ಸರ್ಕಾರ ಸಹಿಸಲ್ಲ: ಸಚಿವ ಸುನೀಲ್ ಕುಮಾರ್ - Mahanayaka
10:21 AM Sunday 14 - September 2025

ಸರ್ಕಾರಿ ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಆಕ್ಷೇಪ ವ್ಯಕ್ತಪಡಿಸಿದರೆ ಸರ್ಕಾರ ಸಹಿಸಲ್ಲ: ಸಚಿವ ಸುನೀಲ್ ಕುಮಾರ್

suneel kumar
19/08/2022

ಉಡುಪಿ: ಸರ್ಕಾರಿ ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಆಕ್ಷೇಪ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಸುನೀಲ್ ಕುಮಾರ್, ದೇಶದ ಸಂಪ್ರದಾಯ ಪರಂಪರೆಯನ್ನು ನಾವು ಉಳಿಸಿಕೊಳ್ಳುತ್ತೇವೆ. ಅನಗತ್ಯವಾಗಿ ವಿವಾದ ಮಾಡಬೇಡಿ ಎಂದಿದ್ದಾರೆ.


Provided by

ಸರ್ಕಾರಿ ಶಾಲೆಗಳಲ್ಲಿ ಸಹಜವಾಗಿಯೇ ಸಾರ್ವಜನಿಕ ಗಣೇಶ ಉತ್ಸವಗಳು ನಡೆಯುತ್ತೆ. ಶಾಲೆಯ ಆಟದ ಮೈದಾನದಲ್ಲಿ ಗಣೇಶೋತ್ಸವ ನಡೆಯುತ್ತೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರೆ ನಮ್ಮ ಸರಕಾರ ಸಹಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದರು.

ಶಾಲೆ ಆವರಣದಲ್ಲಿ ನಮಾಜ್ ಗೆ  ಅವಕಾಶ ಕೊಡುವುದಿಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ ಎಂದು ಇದೇ ವೇಳೆ ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು.

ಆರ್ ಎಸ್ ಎಸ್ ನಿಂದ ಸಿದ್ದರಾಮಯ್ಯಗೆ ಜೀವ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,  ನಮಗೆ ಹಿಂಸೆಯ ಮೇಲೆ ಯಾವತ್ತು ನಂಬಿಕೆ ಇಲ್ಲ ನಾವು ಹಿಂಸೆಯನ್ನು ಯಾವತ್ತೂ ಒಪ್ಪಿಲ್ಲ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ