ಬಸ್ ನಲ್ಲಿ ಕೈಚಳಕ ತೋರಿಸಿ ಚಿನ್ನಾಭರಣ ದೋಚುತ್ತಿದ್ದ ಗ್ಯಾಂಗ್ ಬಂಧನ - Mahanayaka
10:34 AM Saturday 23 - August 2025

ಬಸ್ ನಲ್ಲಿ ಕೈಚಳಕ ತೋರಿಸಿ ಚಿನ್ನಾಭರಣ ದೋಚುತ್ತಿದ್ದ ಗ್ಯಾಂಗ್ ಬಂಧನ

08/06/2025


Provided by

ಹಾಸನ: ರಷ್ ಇರುವ ಬಸ್ ನಲ್ಲಿ ಮಹಿಳೆಯರ ಚಿನ್ನಾಭರಣ ದೋಚುತ್ತಿದ್ದ ಗ್ಯಾಂಗ್ ವೊಂದನ್ನು ಹಾಸನ ಪೊಲೀಸರು ಬಂಧಿಸಿದ್ದು,  ಬರೋಬ್ಬರಿ 6.38 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಆಂಧ್ರದ ಚಿತ್ತೂರು ಜಿಲ್ಲೆ ಕುಪ್ಪಂನ ಗ್ರಾಮದ ಶಶಿ(35), ಮಾಧವಿ(40), ಅಕಿಲ(30), ವಿದ್ಯಾ(29) ಬಂಧಿತ ಆರೋಪಿಗಳಾಗಿದ್ದಾರೆ. ಹೊಳೆ ನರಸೀಪುರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಈ ಗ್ಯಾಂಗ್ ಸಿಕ್ಕಿ ಬಿದ್ದಿದೆ.

ಹಾಸನ‌ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಸರ ಕಳ್ಳತನವಾಗಿದೆ. ಈ ಬಗ್ಗೆ ಕೇಸ್ ದಾಖಲಿಸಿಕೊಂಡ ಹೊಳೆನರಸೀಪುರ ನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದು,  ಇನ್ಸ್ಪೆಕ್ಟರ್ ಪ್ರದೀಪ್ ಪಿಎಸ್ ಐ ಅಭಿಜಿತ್ ನೇತೃತ್ವದ ಟೀಂ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 6.38 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳಲ್ಲಿ 35 ಗ್ರಾಂ ತೂಕದ ಚಿನ್ನದ ಸರ, 22 ಗ್ರಾಂ ತೂಕದ ನೆಕ್ಲೆಸ್‌‍, 5 ಗ್ರಾಂ ತೂಕದ ಬೆಳ್ಳಿ ಗಣಪತಿ ಡಾಲರ್‌ ಹಾಗೂ 29 ಗ್ರಾಂ ತೂಕದ ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ