ಇನ್ ​ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ! - Mahanayaka
3:50 AM Saturday 25 - October 2025

ಇನ್ ​ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ!

stop rape
25/10/2025

ಹಾವೇರಿ: ಜಿಲ್ಲೆ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ವರದಿಗಳ ಪ್ರಕಾರ, ಇನ್ ​ಸ್ಟಾಗ್ರಾಂನಲ್ಲಿ ಬಾಲಕಿ ಪರಿಚಯಿಸಿಕೊಂಡಿದ್ದ ಓರ್ವ ಯುವಕ, ತನ್ನಿಬ್ಬರು ಗೆಳೆಯರ ಜೊತೆ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳನ್ನು ಉದಯ್ ಕರಿಯಣ್ಣನವರ, ಕಿಶನ್ ವಡ್ಡರ್, ಆಕಾಶ್ ಮಂತಗಿ, ಚಂದ್ರು ಗೊಲ್ಲರ ಎಂದು ಗುರುತಿಸಲಾಗಿದೆ.

ಬಾಲಕಿ ಗರ್ಭಾವತಿಯಾಗಿದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಮುಖ ಆರೋಪಿ ಉದಯ್ ಇದೇ ಮಾರ್ಚ್​ ನಲ್ಲಿ ಇನ್ ​ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಬಳಿಕ ಉದಯ್ ಗೆಳೆಯರಾದ ಕಿಶನ್ ವಡ್ಡರ್, ಆಕಾಶ್ ಮಂತಗಿ, ಚಂದ್ರು ಗೊಲ್ಲರ ಸೇರಿಕೊಂಡು ಏಪ್ರಿಲ್​ ತಿಂಗಳಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈಗ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆಯೇ ಈ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ