ಬುದ್ಧಿಮಾಂಧ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: ವಿಡಿಯೋ ಮಾಡಿಕೊಂಡು ವಿಕೃತಿ

stop rape
09/08/2025

ಹಾಸನ: ಬುದ್ಧಿಮಾಂಧ್ಯ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ವಿಡಿಯೋ ಮಾಡಿಕೊಂಡು ಸಂತ್ರಸ್ತೆಯ ಸಹೋದರನಿಗೆ ಕಳುಹಿಸಿರುವ ನೀಚ ಕೃತ್ಯ ಹಾಸನದ ಪೆನ್‌ ಷನ್‌ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಮುಕರು ಬುದ್ಧಿಮಾಂದ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಬಳಿಕ ಕೃತ್ಯದ ವಿಡಿಯೋವನ್ನು ಯುವತಿಯ ಸಹೋದರಿನಿಗೆ ಕಳುಹಿಸಿದ್ದಾರೆ. ನಂತರ ಡಿಲೀಟ್ ಮಾಡಿದ್ದಾರೆ. ವಿಡಿಯೋ ನೋಡಿ ಸಂತ್ರಸ್ತೆಯ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ.

ಘಟನೆ ಸಂಬಂಧ ಸಂತ್ರಸ್ತೆಯ ಸಹೋದರ ದೂರು ನೀಡಿದ್ದು, ಅಬ್ದುಲ್ ಅಫ್ತಾಬ್, ರಾಜಿಕ್ ಪಾಷಾ ಮತ್ತು ಉಮ್ರಾನ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸದ್ಯ ಆರೋಪಿಗಳ ಬಂಧನಕ್ಕೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜೊತೆಗೆ ಅತ್ಯಾಚಾರ ನಡೆಸಲಾಗಿರುವ ಸ್ಥಳ,  ಯಾವಾಗ ನಡೆದ ಘಟನೆ ಎಂದು ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version