ಗ್ಯಾಂಗ್ ಸ್ಟಾರ್ ಕಂ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

ಭೂಗತ ಪಾತಕಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಉತ್ತರ ಪ್ರದೇಶ ಸರ್ಕಾರವು ಮೌ, ಗಾಜಿಪುರದಲ್ಲಿ ಸೆಕ್ಷನ್ 144 ಅನ್ನು ವಿಧಿಸಿದ್ರೆ ಗ್ಯಾಂಗ್ ಸ್ಟಾರ್ ವ್ಯಾಪಕ ಪ್ರಭಾವ ಹೊಂದಿದ್ದ ಗಾಜಿಯೋರ್, ಬಾಲಿಯಾ ಮತ್ತು ಪ್ರಯಾಗ್ರಾಜ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅನ್ಸಾರಿ ಅವರ ಆರೋಗ್ಯ ಇಂದು ಹದಗೆಟ್ಟ ನಂತರ ಅವರನ್ನು ಬಾಂಡಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅನ್ಸಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಇದಕ್ಕೂ ಮುನ್ನ ಮುಖ್ತಾರ್ ಅನ್ಸಾರಿ ಅವರನ್ನು ಉತ್ತರ ಪ್ರದೇಶದ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನಿಂದ ಮಂಗಳವಾರ ಬಿಡುಗಡೆಯಾದ ನಂತರ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಜೈಲಿನಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮುಖ್ತಾರ್ ಅನ್ಸಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನ್ಸಾರಿ ಅವರ ವಕೀಲ ನಸೀಮ್ ಹೈದರ್, ಉತ್ತರ ಪ್ರದೇಶ ವಿಧಾನಸಭೆಯ ಮಾಜಿ ಶಾಸಕರು ಮಾತನಾಡಲು ಕಷ್ಟಪಡುತ್ತಿದ್ದಾರೆ ಎಂದು ಹೇಳಿದ್ದರು.
ಅನ್ಸಾರಿ ಮೌ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಬಹುಜನ ಸಮಾಜ ಪಕ್ಷದ ಟಿಕೆಟ್ನಲ್ಲಿ ಮತ್ತು ನಂತರ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಆಗಿತ್ತು. ಅವರು ಕೊನೆಯ ಬಾರಿಗೆ ೨೦೧೭ ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. 1990ರಲ್ಲಿ ಶಸ್ತ್ರಾಸ್ತ್ರ ಪರವಾನಗಿ ಪಡೆಯಲು ನಕಲಿ ದಾಖಲೆಗಳನ್ನು ಬಳಸಿದ ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದು ಅವರಿಗೆ ಶಿಕ್ಷೆಯಾದ ಎಂಟನೇ ಪ್ರಕರಣವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth