ಉಡುಪಿ: ಗಾಂಜಾ ಸೇವನೆ ಪ್ರಕರಣ: ಮೂವರು ವಶಕ್ಕೆ
02/09/2022
ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆ.30ರಂದು ಉಡುಪಿ ನಗರ ಠಾಣಾ ವ್ಯಾಪ್ತಿಯ ಕಡಿಯಾಳಿ ದೇವಸ್ಥಾನದ ಸಾರ್ವಜನಿಕ ಸ್ಥಳದಲ್ಲಿ ಆಶೀಕ್(22) ಹಾಗೂ ಅತೀಶ (25) ಮತ್ತು ಆ. 29ರಂದು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಾಪು ಬಂಗ್ಲೆಗುಡ್ಡೆ ಮೈದಾನದ ಬಳಿ ಇಸ್ರಾರ್ ತಜ್ಮಲ್ ಹುಸೇನ್ ಶೇಕ್ (32) ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇವರನ್ನು ಮಣಿಪಾಲ ಕೆಎಂಸಿಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಇವರೆಲ್ಲ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























