3:36 AM Monday 15 - September 2025

ಗಾಂಜಾ ಸೇವಿಸಿ ಸಾರ್ವಜನಿಕರ ಜೊತೆ ಕಿರಿಕ್: ಯುವಕ ಪೊಲೀಸ್ ವಶಕ್ಕೆ!

arrest
06/02/2023

ಮಾದಕ ವಸ್ತು ಸೇವನೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುದು ಗ್ರಾಮದ ಸುಜೀರ್ ಶಾಲಾ ಬಳಿ  ನಡೆದಿದೆ. ಇಲ್ಲಿನ ಸಾರ್ವಜನಿಕ ಸ್ಥಳದಲ್ಲಿ  ಒಬ್ಬಾತ ಯಾವುದೋ ಮಾದಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ.

ಈ ಮಾಹಿತಿ ದೊರೆತ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ಓಡಲು ಪ್ರಯತ್ನಿಸಿದ ಸರ್ಪುದ್ದೀನ್   ಎಂಬಾತನನ್ನು ವಶಕ್ಕೆ ಪಡೆದು ಮಾದಕ  ವಸ್ತು  ಗಾಂಜಾ ಸೇವಿಸಿರುವ ಬಗ್ಗೆ ಅನುಮಾನದ ಮೇರೆಗೆ  ವೈದ್ಯಕೀಯ ತಪಾಸಣೆಗೆ ಮಾಡಲಾಯಿತು. ಇದೇ ವೇಳೆ ಈತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದಾಗಿ ದೃಢಪಟ್ಟಿದೆ.

ಈತನ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 9/2023 ಕಲಂ :27(ಬಿ) ಎನ್ ಡಿಪಿಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version